ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಶುಕ್ರವಾರ ಜಿಂಕೆಯೊಂದು ಮೃತಪಟ್ಟಿದೆ. ಹನೂರು ಪಟ್ಟಣದ ಹೊರವಲಯದ ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿ ಜಿಂಕೆ ಗಾಯಗೊಂಡು ನರಳಾಡಿದೆ. ಈ ವಿಷಯವನ್ನು ಪ್ರಯಾಣಿಕರು ಅದೇ ಮಾರ್ಗದಲ್ಲಿದ್ದ ತುರ್ತುವಾಹನ 112 ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಜಿಂಕೆಗೆ ನೀರುಣಿಸಿ ಹಾರೈಕೆ ಮಾಡಿದ್ದಾರೆ. ಅರಣ್ಯ ಇಲಾಖೆಯವರು ಬರುವ ವೇಳೆಗೆ ಜಿಂಕೆ ಮೃತಪಟ್ಟಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

