Breaking News

ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾ*ಚಾರ ಪ್ರಕರಣ: ಸಂತ್ರಸ್ತೆ ಕೋರ್ಟ್‌ಗೆ ಹಾಜರು..

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಸಂತ್ರಸ್ತೆಯು ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ನುಡಿದಿದ್ದಾರೆ. ಪ್ರಜ್ವಲ್‌ ರೇವಣ್ಣ ಕೂಡ ವಿಚಾರಣೆಗೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ. ಪ್ರಜ್ವಲ್‌ ರೇವಣ್ಣ ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾದ ಸಂತ್ರಸ್ತೆ ಕೋರ್ಟ್‌ನಲ್ಲಿ ನಡೆದ ಇನ್‌ ಕ್ಯಾಮರಾ ಪ್ರೊಸೀಡಿಂಗ್‌ ಮೂಲಕ ಸಾಕ್ಷಿ ನುಡಿದಿದ್ದಾರೆ ಎನ್ನಲಾಗಿದೆ. ನ್ಯಾಯಾಲಯವು ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದ್ದು, ಅಂದು ಸಂತ್ರಸ್ತೆಯ ಕುಟುಂಬದವರ ವಿಚಾರಣೆ ನಡೆಯುವ ಸಾಧ್ಯತೆಗಳಿವೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *