ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು.

ಅಂತ್ಯಕ್ರಿಯೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇಲೆ ಮಣ್ಣು ಮಾಡಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ ಎಂದರು.

ಸಿಐಡಿ ಎಸ್.ಪಿ, ಎಸಿಪಿ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಮ್ಮುಖದಲ್ಲಿ ಕೋರ್ಟ್ ನಿರ್ದೇಶನದ ಮೇರೆಗೆ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

