Breaking News
Oplus_131072

ಮಧ್ಯಪ್ರದೇಶ: ಪಿಕಪ್ ವ್ಯಾನ್ ಪಲ್ಟಿ, ನಾಲ್ವರ ಸಾವು!

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬರಾಟಿಗಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲ್ಯಾಟೆರಿ ಪೊಲೀಸ್ ಠಾಣೆ ವ್ಯಾಪ್ತಿಯ ಆರಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಇಂದೋರ್ ಜಿಲ್ಲೆಯ ಸಿರೋಂಜ್‍ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಮೋವ್‍ನಿಂದ ಬಂದಿದ್ದ ಹದಿನಾರು ಜನರು ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಇಲ್ಲಿಂದ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *