Breaking News

ಬೆಳಗಾವಿ: ಗೋಕಾಕ್‌ನಲ್ಲಿ ಯುವಕನ ಭೀಕರ ಹತ್ಯೆ!!

ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೋಕಾಕ್ ಗೊಂದಳಿ ಗಲ್ಲಿ ನಿವಾಸಿ ಪರಶುರಾಮ್(26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಸ್ಥಳಕ್ಕೆ ಗೋಕಾಕ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *