Breaking News

ಮಡಿಕೇರಿ :ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಕೊಲೆ; ಐವರು ಆರೋಪಿಗಳ ಬಂಧನ!

ಗ್ರಾಮದ ಕಾಫಿ ತೋಟದ‌ ಮನೆಯೊಂದರಲ್ಲಿ ಇತ್ತೀಚೆಗೆ ನಡೆದ ಕೇರಳದ ಕಣ್ಣೂರು ಜಿಲ್ಲೆಯ ಪ್ರದೀಪ್‌ ಕೊಯ್ಲಿ ಎಂಬುವವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರ ಬಳಿಯಿಂದ 13.03 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, 2 ಮೊಬೈಲ್‌, ಮೃತ ವ್ಯಕ್ತಿಯ ಮೊಬೈಲ್‌ ಮತ್ತು ಮೃತ ವ್ಯಕ್ತಿಗೆ ಸೇರಿದ ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ‌ ಮನೆಯಲ್ಲಿ ವಾಸವಿದ್ದ ಕಣ್ಣೂರು ಜಿಲ್ಲೆಯ ಪ್ರ‌ದೀಪ್‌ ಕೊಯ್ಲಿಯವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಕುರಿತು ಗೋಣಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರದೀಪ್‌ ಅವರನ್ನು ಕೊ*ಲೆ ಮಾಡಿದ ಅನಂತರ ಮನೆಯಲ್ಲಿದ್ದ ಮೃ*ತದೇಹವನ್ನು ಹೂತು ಹಾಕುವ ಕುರಿತು ಉಪಾಯ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ವಿವರಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *