Breaking News

ಪುತ್ರನ ಸಾವಿನಿಂದ ಖಿನ್ನಳಾಗಿದ್ದ ವೃದ್ಧೆ ಮಹಡಿಯಿಂದ ಹಾರಿ ಆತ್ಮಹತ್ಯೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ರಾಜೀವ್‌ ಗಾಂಧಿ ನಗರ ಚರ್ಚ್‌ ರೋಡ್‌ ನಲ್ಲಿ ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆಯನ್ನು ವಿಜಯಲಕ್ಷ್ಮೀ (60) ಎಂದು ಗುರುತಿಸಲಾಗಿದೆ.ಕೋವಿಡ್‌ ಸಮಯದಲ್ಲಿ ಓರ್ವ ಪುತ್ರನನ್ನು ಕಳೆದುಕೊಂಡಿದ್ದ ವೃದ್ಧೆ. ಸೊಸೆ ಹಾಗೂ ಮೊಮ್ಮಕ್ಕಳ ಜೊತೆಗೆ ವಾಸವಾಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು
ಬೆಳಗಿನ ಜಾವ 4 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *