Breaking News
Oplus_131072

ವಕೀಲರೊಬ್ಬರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆ! ಕೊಲೆ ಅನುಮಾನ ಆರೋಪ…

ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಜಗದೀಶ್ ಅವರ ಮೃತದೇಹ ಶುಕ್ರವಾರ ರಾತ್ರಿ ವೇಳೆ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಜಗದೀಶ್ ಅವರು ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದವರಾಗಿದ್ದು, ನಗರದಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಶಂಕಿಸಿ ಅವರ ಸೋದರ ಸಂಬಂಧಿ ಡಾ.ಪ್ರಭಂಜನ್ ಎಂಬುವರು ದೂರು ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಗೇರಿಯ ನೈಸ್ ರಸ್ತೆಯ ಸಿ.ವಿ.ರಾಮನ್ ಎಸ್ಟೇಟ್ ಜಂಕ್ಷನ್‌ನಲ್ಲಿ ಮೃತದೇಹ ಬಿದ್ದಿದೆ ಎಂದು ಸಾರ್ವಜನಿಕರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *