Breaking News

ಗುಂಡ್ಲುಪೇಟೆ: ಗಂಡಾನೆ ಕಳೆಬರ ಕೊಳೆತ ಸ್ಥಿತಿಯಲ್ಲಿ ಪತ್ತೆ!!

ಮೃತ ಗಂಡಾನೆಗೆ ಅಂದಾಜು 35 ರಿಂದ 40 ವರ್ಷ ವಯಸ್ಸಾಗಿದ್ದು, ಅರಣ್ಯ ಸಿಬ್ಬಂದಿ ಜಿ.ಎಸ್.ಬೆಟ್ಟ ವಲಯದ ಹಂಗಳ ಸೌತ್ ಶಾಖೆಯ, ಸೋಮನಾಥಪುರ ಸ್ಯಾಂಡಲ್ ರಿಸರ್ವ್‍ನ ಹಿರಿಕೆರೆ ಅರಣ್ಯ ಪ್ರದೇಶದ ಬಳಿ ಗಸ್ತು ತಿರುಗುತ್ತಿದ್ದಾಗ ಕಂಡು ಬಂದಿದೆ. ಮರಣೋತ್ತರ ಪರೀಕ್ಷೆ ನಂತರ ಮೃತ ಕಾಡಾನೆ ಕಳೆಬರವನ್ನು ಅರಣ್ಯ ಇಲಾಖೆ ನಿಯಮಾನುಸಾರ ವಿಲೇ ಮಾಡಲಾಯಿತು. ಈ ಸಂದರ್ಭ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್, ಜಿ.ಎಸ್.ಬೆಟ್ಟ ವಲಯ ಅರಣ್ಯಾಧಿಕಾರಿ ಮಲ್ಲೇಶ್, ವನ್ಯಜೀವಿ ಪರಿಪಾಲಕ ನಂಜುಂಡರಾಜೇ ಅರಸ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *