Breaking News

ತಮಿಳುನಾಡು: ಆಕ್ರಮವಾಗಿ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿ ವಶ!!

ಆಕ್ರಮವಾಗಿ ತಮಿಳುನಾಡಿಗೆ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಸಹಕಾರದೊಡನೆ ವಶಪಡಿಸಿಕೊಂಡಿದ್ದಾರೆ.ಗ್ರಾಮಾಂತರ ಪ್ರದೇಶಗಳಲ್ಲಿ ಅನ್ನಭಾಗ್ಯ ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸಿ ಒಂದೆಡೆ ಸಂಗ್ರಹಿಸಿ ರೈಸ್ ಮಿಲ್‌ಗಳಿಗೆ ಹಾಗೂ ಹೊರ ರಾಜ್ಯಗಳಿಗೆ ಸಾಗಾಟ ಮಾಡುತ್ತಿರುವುದು ನಿರಂತರವಾಗಿದೆ.ದಾಳಿಯಲ್ಲಿ ಪಟ್ಟಣ ಠಾಣೆ ಪ್ರಭಾರ ಆರಕ್ಷಕ ಉಪನಿರೀಕ್ಷಕ ಸುಪ್ರೀತ್, ಎಎಸ್‌ಐ ಮಧುಕುಮಾರ್, ಮುಖ್ಯ ಪೇದೆ ಸೂರ್ಯಪ್ರಕಾಶ್, ಪೇದೆಗಳಾದ ಸಚಿನ್, ಅನಿಲ್, ಚಾಲಕ ನಂಜುಂಡಸ್ವಾಮಿ ಭಾಗವಹಿಸಿದ್ದರು. ಲಾರಿಯನ್ನು ವಶಪಡಿಸಿಕೊಂಡ ನಂತರ ಆಹಾರ ನಿರೀಕ್ಷಕ ಪ್ರಸಾದ್ ರವರು ಈ ಸಂಬಂಧ ಪಟ್ಟಣ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *