ಬ್ಯಾಡಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಸ್ ನಿಲ್ದಾಣ ಸ್ವಚ್ಛಗೊಳಿಸಬೇಕು. ನಿತ್ಯವೂ ಸ್ವಚ್ಛತೆ ಕಾಪಾಡಬೇಕು. ಬಸ್ ಕಾರ್ಯಾಚರಣೆ ಸುಧಾರಣೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾವೇರಿ ಕೇಂದ್ರ ಬಸ್ ನಿಲ್ದಾಣಕ್ಕೂ ಪ್ರಿಯಾಂಗ ಅವರು ಭೇಟಿ ನೀಡಿದರು. ಸಾರಿಗೆಗಳ ವ್ಯವಸ್ಥಿತ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು. ಬಸ್ಗಳು ಹಾಗೂ ಪ್ರಯಾಣಿಕರ ದಟ್ಟಣೆಯನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಅಧ್ಯಯನ ಮಾಡಿ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

