Breaking News

ಹುಬ್ಬಳ್ಳಿ – ಧಾರವಾಡದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ರೋಡ್‌ಗಳಿಗೆ ಡಾಂಬರು!

ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಪ್ಲಾಸ್ಟಿಕ್ ಬಳಸುವ ಮೂಲಕ ಏಕಬಳಕೆಯ ಪ್ಲಾಸ್ಟಿಕ್‌ನಿಂದ ಪರಿಸರಕ್ಕಾಗುವ ಹಾನಿಯನ್ನು ತಪ್ಪಿಸುವುದರ ಜೊತೆಗೆ, ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಕೂಡ ಬಳಕೆ ಮಾಡಿಕೊಳ್ಳಬಹುದೆಂದು ತೋರಿಸಿಕೊಟ್ಟಿದೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ. ಹೌದು ಹೊಸ ಮಾರ್ಗದ ಮೂಲಕ ರಸ್ತೆಗಳನ್ನು ಸುಸಜ್ಜಿತವಾಗಿಸುತ್ತಿದೆ. ಹುಬ್ಬಳ್ಳಿಯ ಲಿಂಗರಾಜನಗರದಲ್ಲಿ ಪಾಲಿಕೆಯ ವತಿಯಿಂದ ಕೈಗೆತ್ತಿರೊಂಡಿರುವ ಡಾಂಬಾರು ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಪ್ರಾಯೋಗಿಕವಾಗಿ ಬಳಸಲಾಗುತ್ತಿದೆ. ಹುಬ್ಬಳ್ಳಿ – ಧಾರವಾಡದ ಪ್ರತಿ ಮನೆ ಮನೆಯಿಂದ ದಿನ ನಿತ್ಯ ಕಸ‌ ಸಂಗ್ರಹಿಸುವ ಪಾಲಿಕೆ, ಅದನ್ನು ಮೊದಲು ಕಾಂಪ್ಯಾಕ್ಟರ್‌ ಸ್ಟೇಷನ್‌ಗೆ ಕೊಂಡೊಯ್ಯುತ್ತದೆ. ಅಲ್ಲಿ ರಸ್ತೆ ನಿರ್ಮಾಣಕ್ಕೆ ಬಳಸಬಹುದಾದ ಪ್ಲಾಸ್ಟಿಕ್ ತ್ಯಾಜ್ಯವನ್ನು ಪ್ರತ್ಯೇಕಿಸಿ, ಶ್ರೆಡ್ಡಿಂಗ್ ಮಷಿನ್ ಸಹಾಯದಿಂದ ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡಿ, ಡಾಂಬರ್ ಮಿಶ್ರಣ ಘಟಕಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಗರದಲ್ಲಿ ಡಾಂಬರೂ ಹಾಕಿದರೂ ಕೆಲವು ರಸ್ತೆಗಳಲ್ಲಿ ಒಂದೇ ಮಳೆಗೆ ಸಮಸ್ಯೆ ಆಗುತ್ತಿತ್ತು. ಬಿಸಿಲ ಝಳ ಹೆಚ್ಚಳ ಹಾಗೂ ಧೂಳಿನಿಂದ ಕಂಗೆಟ್ಟಿದ್ದ ಈ ಭಾಗದ ಜನರಿಗೆ ಇದೀಗ ಕೊನೆಗೂ ಮಹಾನಗರ ಪಾಲಿಕೆಯಿಂದ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *