ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರ ಗಾಯಗೊಂಡಿರುವ ಪ್ರಕರಣ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಳಲೆ ಗೇಟ್ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಚಿನ್ನಸ್ವಾಮಪ್ಪ (55) ಮೃತಪಟ್ಟಿದ್ದು, ಹೆಮ್ಮರಗಾಲ ಗ್ರಾಮದ ರಾಮೇಗೌಡ (55) ಎಂಬವರಿಗೆ ಗಂಭೀರ ಗಾಯಗಳಾಗಿವೆ.ಅಪಘಾತದ ಪರಿಣಾಮ ಬೈಕ್ ಸವಾರ ಚಿನ್ನಸ್ವಾಮಪ್ಪ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ. ರಾಮೇಗೌಡಗೆ ಗಂಭೀರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ರಘು, ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

