Breaking News

ಅಜಮ್ಮಘಡ: ಮಾಜಿ ಪ್ರೇಯಸಿಯ ಮೇಲೆ ಆಯಸಿಡ್​ ಎರಚಿದ ಪಾಗಲ್ ಪ್ರೇಮಿ!!

ರೀಮಾ ಮತ್ತು ರಾಮ್​ ಜನಮ್​ ಸಿಂಗ ಪಟೇಲ್​ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ದೂರಾಗಿದ್ದರು. ಯುವತಿ ರೀಮಾಗೆ ಇತ್ತೀಚೆಗೆ ಬೇರೊಬ್ಬ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ಇದೇ ಮೇ.27ಕ್ಕೆ ಯುವತಿಯ ಮದುವೆಗೆ ಸಿದ್ದತೆ ನಡೆಸಬೇಕಿತ್ತು. ಆದರೆ ಇಂದು ಆಕೆಯ ಮಾಜಿ ಪ್ರಿಯತಮ ಆಕೆಯ ಮೇಲೆ ಆಯಸಿಡ್​ ದಾಳಿ ಮಾಡಿದ್ದಾನೆ.ನನಗೆ ಸಿಗದ ನೀನು ಇನ್ಯಾರಿಗೂ ಸಿಗಬಾರದು’ ಎಂದು ಹೇಳಿ ಆಕೆಯ ಮೇಲೆ ಆಯಸಿಡ್ ಎರಚಿ ಪರಾರಿಯಾಗಿದ್ದಾನೆ. ಆಯಸಿಡ್​ ದಾಳಿಯಿಂದ ಯುವತಿ ತೀವ್ರವಾಗಿ ಗಾಯಗೊಂಡಿದ್ದು. ಮುಖ, ಭುಜ, ಕುತ್ತಿಗೆ ಮತ್ತು ದೇಹದ ಮೇಲ್ಭಾಗ ತೀವ್ರವಾಗಿ ಸುಟ್ಟ ಗಾಯಗಳಾಗಿವೆ.ಆಯಸಿಡ್ ದಾಳಿಯ ನಂತರ ಆಕೆಯನ್ನು ಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ನಂತರ ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪಟೇಲ್ ಮತ್ತು ಇತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಬಳಸಲಾದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *