ನಗರದ ಅಂಜನಿ ಬಡಾವಣೆಯ ಮನೆಯೊಂದರ ಮೇಲೆ ನಗರಠಾಣೆ ಪೊಲೀಸರು ಶುಕ್ರವಾರ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿ ಒಟ್ಟು 5 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಂಜನಿ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಪಿ.ಮುರಳೀಧರ್ ನೇತೃತ್ವದಲ್ಲಿ ನಗರಠಾಣೆ ಪೊಲೀಸರು ದಾಳಿ ನಡೆಸಿದರು.ಮಹಿಳಾ ಮತ್ತು ಪುರುಷ ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

