ಮನೆಯ ಮುಂದೆ ಆಟವಾಡುತ್ತಿದ್ದ 10ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ನಡೆದಿದೆ.ಮೃತ ಬಾಲಕನನ್ನು ಪ್ರಥಮ್ (16) ಎಂದು ಗುರುತಿಸಲಾಗಿದೆ. ಶಾಲೆಗೆ ರಜೆಯಿದ್ದ ಹಿನ್ನಲೆ ಪ್ರಥಮ್ ತನ್ನ ಪಾಡಿಗೆ ತಾನು ಮನೆಯ ಮುಂದೆ ಮಧ್ಯಾಹ್ನದ ವೇಳೆ ಆಟವಾಡುತ್ತಿದ್ದ. ಕೂಡಲೇ ಬಾಲಕನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಫಲಕಾರಿಯಾಗಿಲ್ಲ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

