Breaking News

ಬೆಂಗಳೂರು :ಕ್ಷುಲ್ಲಕ ಕಾರಣಕ್ಕೆ ಸುತ್ತಿಗೆಯಿಂದ ಹೊಡೆದು ಹೆಂಡತಿಯ ಕೊಲೆ

ಗಂಡನೊಬ್ಬ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ದಂಪತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ವಾಗ್ಯುದ್ಧ ಆರಂಭವಾಗಿದ್ದು, ಅದು ಗಲಾಟೆಗೆ ತಿರುಗಿದೆ.ಆಗ ಗಂಡ ಸುತ್ತಿಗೆಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಮ್ಮಿಗೆಪುರದ ಗಾಣಪ್ಪ ಲೇಔಟ್‌ನಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ಭಾಗ್ಯ ಎಂದು ಗುರುತಿಸಲಾಗಿದ್ದು, ಪತಿ ಶ್ರೀ ರಾಮ ಕೊಲೆ ಆರೋಪಿಯಾಗಿದ್ದಾನೆ. ಭಾಗ್ಯ ಹಾಗು ಶ್ರೀ ರಾಮನ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಹಾಗೂ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಕೊಲೆ ಕುರಿತಂತೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *