Breaking News
Oplus_131072

ರಾಮನಗರ: ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ!!

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. KA 03 NA 4031 ಸಂಖ್ಯೆಯ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಕ್ಕುರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *