ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ 3 ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ನಡೆದಿದೆ. ಸುಶಾಂತ್ ವಡ್ಡು ಗ್ರಾಮದ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಮೇ 2ರಂದು ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಷಯದಲ್ಲಿ ಫೇಲ್ ಆಗಿದ್ದ. ಇದರಿಂದ ಮನನೊಂದು ಮನೆ ಬಿಟ್ಟು ಹೋಗಿದ್ದಾನೆ. ಕಳೆದು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಪೋಷಕರು ಹುಡುಕಾಟ ನಡೆಸಿದ್ದಾರೆ. ಪೋಷಕರು ಕಣ್ಣೀರಿಡುತ್ತಿದ್ದು, ಮಗನ ಬಗ್ಗೆ ಯಾವುದೇ ಮಾಹಿತಿ ಸಿಕ್ಕರೂ ನೀಡಿ, ನಮ್ಮ ಮಗನನ್ನು ಹುಡುಕಿಕೊಡಿ ಎಂದು ಮನವಿ ಮಾಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

