Breaking News

ಮಡಿಕೇರಿ: ಹುಬ್ಬಳ್ಳಿಗೆ ತೆರಳುತ್ತಿದ್ದ ಮಾರುತಿ ಓಮ್ನಿ ಮೇಲೆ ಕಾಡಾನೆ ದಾಳಿ!!

ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಅರಣ್ಯ ಡಿಪೋ ಬಳಿ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿದ್ದುದನ್ನು ಕಂಡ ಷರೀಫ್ ತಮ್ಮ ವಾಹನವನ್ನು ನಿಲ್ಲಿಸಿದರಾದರೂ, ರಸ್ತೆ ದಾಟುತ್ತಿದ್ದ ಕಾಡಾನೆಗಳ ಹಿಂಡಿನಲ್ಲಿದ್ದ ಹೆಣ್ಣಾನೆಯೊಂದು ಇವರಿದ್ದ ವ್ಯಾನ್ ಮೇಲೆ ಎರಗಿದೆ.ಆನೆಯ ಆಕ್ರೋಶಕ್ಕೆ ವ್ಯಾನ್ ನಜ್ಜುಗುಜ್ಜಾಗಿದ್ದು, ಒಳಗಿದ್ದವರ ಪೈಕಿ ಷರೀಫ್ ಗಂಭೀರವಾಗಿ ಗಾಯಗೊಂಡರೆ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು‌ ಮತ್ತು ಅವರ ಬಾವನವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಘಟನೆ ನಡೆದ ಸಂದರ್ಭ ಆ ಮಾರ್ಗವಾಗಿ ಕುಶಣಾಲನಗರದಿಂದ ಸುಂಟಿಕೊಪ್ಪಕ್ಕೆ ಆಗಮಿಸುತ್ತಿದ್ದ ಜಿ.ಪಂ.ಮಾಜಿ ಸದಸ್ಯ ಪಿ.ಎಂ.ಲತೀಫ್ ಅವರು ಗಾಯಾಳುಗಳನ್ನು ತಮ್ಮ ವಾಹನದಲ್ಲಿ ಕುಶಾಲನಗರ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *