ಶನಿವಾರ ರಾತ್ರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಮೂಲಕ ಗೂಡ್ಸ್ ವಾಹನದಲ್ಲಿ ಈ ಗೋಮಾಂಸ ಸಾಗಿಸಲಾಗುತ್ತಿತ್ತು.ಬೆಳಗಾವಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಟನ್ ಗೋಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇಡೀ ವಾಹನದಲ್ಲಿ ಅಕ್ರಮ ಗೋಮಾಂಸ ತುಂಬಿಸಲಾಗಿತ್ತು. ತಪಾಸಣೆ ಸಮಯದಲ್ಲಿ ಗೊತ್ತಾಗದಿರಲಿ ಎಂಬ ಕಾರಣಕ್ಕೆ ಮುಂದಿನ ಒಂದೆರಡು ಸಾಲಿನಲ್ಲಿ ಮೀನುಗಳನ್ನು ಇಡಲಾಗಿತ್ತು. ತಕ್ಷಣವೇ ಈ ಬಗ್ಗೆ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ವಾಹನ ಹಾಗೂ ಒಂದು ಟನ್ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

