Breaking News

ಧಾರವಾಡ :ಚಿಗರಿ ಮಾರ್ಗದಲ್ಲಿ ಕಾರುಗಳ ಅಪಘಾತ, ಓರ್ವ ಸಾವು, ಮೂವರಿಗೆ ಗಾಯ!!

ಎರಡು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಕಾರಿಡಾರ್‌ನ ಪಿಬಿ ರಸ್ತೆಯಲ್ಲಿ ರವಿವಾರ ನಡೆದಿದೆ. ಶಿವಾನಂದ ಹಾಗೂ ಮಂಜುನಾಥ ಹುಬ್ಬಳ್ಳಿಯಿಂದ ಧಾರವಾಡದತ್ತ ಕಾರಿನಲ್ಲಿ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಧಾರವಾಡದ ಮಾರ್ಡನ್ ಹಾಲ್ ಎದುರು ಬರುತ್ತಿದ್ದಂತೆ ಧಾರವಾಡದಿಂದ ಹುಬ್ಬಳ್ಳಿ ಮಾರ್ಗವಾಗಿ ಗದಗಕ್ಕೆ ಹೊರಟಿದ್ದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಶಿವಾನಂದ ಸ್ಥಳದಲ್ಲಿಯೇ ಮೃ*ತಪಟ್ಟಿದ್ದಾರೆ. ಕಾರು ಚಾಲಕ ಮಂಜುನಾಥಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನೋವಾ ಕಾರಿನಲ್ಲಿದ್ದ ಗದಗ ಮೂಲದ ಮನೀಶರೆಡ್ಡಿ ಬಸವರೆಡ್ಡಿ ಹುಚ್ಚನ್ನವರ ಹಾಗೂ ಮಂಜುನಾಥರೆಡ್ಡಿ ಸಾಸಿವೆಹಳ್ಳಿ ಎಂಬುವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಅಪಘಾತಕ್ಕೀಡಾದ ಎರಡು ಕಾರುಗಳನ್ನು ಕ್ರೇನ್ ಸಹಾಯದಿಂದ ಸ್ಥಳಾಂತರಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *