Breaking News

ಬೆಳಗಾವಿ: ಮಾಜಿ ಶಾಸಕ ಪುತ್ರನ ಕಾರು ಡಿಕ್ಕಿ, ಒಂದೇ ಕುಟುಂಬದ ಮೂವರು ಸಾವು!!

ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕೀಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ.ಅಲ್ಟೋ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *