ಸೆಕ್ಯೂರಿಟಿ ಗಾರ್ಡ್ ಒಬ್ಬರು ಕಾರಿನ ಚಾಲಕನಿಗೆ ಸುಖಾ ಸುಮ್ಮನೆ ಹಾರ್ನ್ ಮಾಡಬೇಡಿ ಎಂದು ಹೇಳಿದ್ದಾರೆ. ಈ ವೇಳೆ ಚಾಲಕ ಸೆಕ್ಯೂರಿಟಿ ಕಾರ್ಡ್ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಒಂದು ಘಟನೆ ನೈಋತ್ಯ ದೆಹಲಿ ವಸಂತ್ ಕುಂಜ್ ನಲ್ಲಿ ನಡೆದಿದೆ.ಥಾರ್ ಕಾರು ಚಾಲಕನೊಬ್ಬ ಹಾರ್ನ್ ಮಾಡಬೇಡಿ ಎಂದು ಹೇಳಿದ ಭದ್ರತಾ ಸಿಬ್ಬಂದಿ ಮೇಲೆ ಕಾರು ಹರಿಸಿರುವ ಭೀಕರ ಘಟನೆ ನಡೆದಿದೆ.ಕಾರು ಹರಿದ ಪರಿಣಾಮ ಸಿಬ್ಬಂದಿಯ ಎರಡೂ ಕಾಲುಗಳಲ್ಲಿ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ಮೂಳೆಗಳು ಮುರಿದಿವೆ. ಗಾಯಾಳುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಸಂತ್ ಕುಂಜ್ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಥಾರ್ ಕಾರು ಚಾಲಕನನ್ನು ಪ್ರಸ್ತುತ ಬಂಧಿಸಲಾಗಿದೆ. ಬಂಧಿತ ಥಾರ್ ಚಾಲಕನನ್ನು ರಂಗಪುರಿ ನಿವಾಸಿ ವಿಜಯ್ ಅಲಿಯಾಸ್ ಲಾಲಾ (24) ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

