Breaking News

ಹಾವೇರಿ: ಹೊಸ ಬೈಕ್‌ ಖರೀದಿ ದಿನವೇ ಅಪಘಾತ, ಯುವಕರಿಬ್ಬರು ದುರ್ಮರಣ!!

ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ, ನಾಗರಾಜ ಹಾಗೂ ಮಲ್ಲೇಶ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಹೇಳಿದರು. ಹೊಸ ಬೈಕ್ ಖರೀದಿಸಿ ಊರಿಗೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ಅಪಘಾತಕ್ಕೆ ಕಾರಣವಾದ ಲಾರಿಯನ್ನು ಅಕ್ರಮವಾಗಿ ಮರಳು ಸಾಗಣೆಗೆ ಬಳಸಲಾಗುತ್ತಿತ್ತು. ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *