Breaking News
Oplus_131072

ಬಂಗಾರಪೇಟೆ: ಲಾರಿ, ಟಿಪ್ಪರ್ ನಡುವೆ ಅಪಘಾತ, ಇಬ್ಬರು ಸಾವು!!

ಬಂಗಾರಪೇಟೆ ಮತ್ತು ಟೇಕಲ್ ಮುಖ್ಯ ರಸ್ತೆಯ ಗೊರವನಹಳ್ಳಿ ಬಳಿ ಶುಕ್ರವಾರ ಟಿಪ್ಪರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.ಟಿಪ್ಪರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬೂದಿಕೋಟೆ ಪೋಲಿಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಸುನೀಲ್ ಐರೋಡಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹನುಮಂತ (55) ಮತ್ತು ಹುಲಿಬೆಲೆಯ ಎಚ್.ವಿ.ನಾಗರಾಜ (35) ಮೃತರು.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *