ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಸ್ತೆ ಅಪಘಾತ ಪ್ರಕರಣ, ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು.
ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತರು.ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದರು ಹುಬ್ಬಳ್ಳಿ ಇಂದ ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತ. ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

