ರಾಜಸ್ಥಾನದ ಜೋಧ್ಪುರದ ಕುಡಿ ಭಗತ್ಸುನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಇದೀಗ ಈತನ ಬಂಧನವಾಗಿದೆ.ಶರ್ಮಾ ದೇಶೀಯ ಕ್ರಿಕೆಟ್ನಲ್ಲಿ ಬರೋಡಾವನ್ನು ಪ್ರತಿನಿಧಿಸಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ಸಹಾಯಕ ಪೊಲೀಸ್ ಆಯುಕ್ತ ಆನಂದ್ ಸಿಂಗ್, ದೂರುದಾರೆಯಾಗಿರುವ ಯುವತಿ ಕುಡಿ ಭಗತ್ಸುನಿಯ ಸೆಕ್ಟರ್ 2 ರ ನಿವಾಸಿಯಾಗಿದ್ದು, ಅವರು ಶಿವಾಲಿಕ್ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಸಂತ್ರಸ್ತೆಯ ವೈದ್ಯಕೀಯ ವರದಿಗಳನ್ನು ದಾಖಲಿಸಿದ ನಂತರ ಮತ್ತು BNNS ಸೆಕ್ಷನ್ 180 ರ ಅಡಿಯಲ್ಲಿ ನ್ಯಾಯಾಲಯದ ಮುಂದೆ ದೂರುದಾರರ ನ್ಯಾಯಾಂಗ ಹೇಳಿಕೆಯನ್ನು ಪಡೆದುಕೊಂಡ ನಂತರ ಪೊಲೀಸರು ಆರೋಪಿಯ ಹೆಸರನ್ನು ಬಹಿರಂಗಪಡಿಸಿದರು.ಪೊಲೀಸ್ ಎಫ್‌ಐಆರ್ ಪ್ರಕಾರ, ಕ್ರಿಕೆಟಿಗ ವಿವಾಹದ ಭರವಸೆ ನೀಡುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡು ದೈಹಿಕ ಸಂಬಂಧ ಬೆಳೆಸಿದ್ದಾನೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

