Breaking News

ಭದ್ರಾವತಿ: ಕ್ರಿಕೆಟ್ ಆಟದಲ್ಲಿ ಜಗಳ, ಯುವಕನ ಕೊಲೆಯಲ್ಲಿ ಅಂತ್ಯ!

ಅರುಣ್ ಮತ್ತು ಇತರರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.ಜಗಳ ರಾತ್ರಿ ಗಾಂಧಿನಗರ, ಕೇಶವಪುರ ಬಡಾವಣೆ ನೀರಿನ ಟ್ಯಾಂಕ್ ಹತ್ತಿರ ಮದ್ಯ ಸೇವಿಸುವಾಗ ಮುಂದುವರಿದಿದ್ದು, ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಯುವಕನ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಯುವಕ ಸಂಜಯ್ ಎಂಬಾತ ಗಾಯಗೊಂಡಿದ್ದಾನೆ.ನಗರದ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪನಿರೀಕ್ಷಕ ಕೃಷ್ಣಕುಮಾರ್, ನಗರ ಪೊಲೀಸ್ ಠಾಣೆ ಉಪನಿರೀಕ್ಷಕ ಚಂದ್ರಶೇಖರ್ ನಾಯಕ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.ಹೊಸಮನೆ ಶಿವಾಜಿ ಸರ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *