ಕುನ್ನಹಳ್ಳಿ ಗ್ರಾಮದ ಕೃಷಿಕ ಹಳೆ ಮೂಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್. ಶಿವಾನಂದ ಅವರ ಭತ್ತದ ಗದ್ದೆಯಲ್ಲಿ ಸೋಮವಾರ ಹಸುವಿನ ಕಳೇಬರ ಪತ್ತೆಯಾಗಿತ್ತು.ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ.ಸ್ಥಳದಲ್ಲಿ ಅರಣ್ಯ ಇಲಾಖೆ ವತಿಯಿಂದ ಕ್ಯಾಮೆರಾ ಅಳವಡಿಸಲಾಗಿದ್ದು, ಹುಲಿಯ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಲು ಪ್ರಯತ್ನಿಸಲಾಗುತ್ತಿದೆ. ಮೂಡಿಗೆರೆ ಆರ್ ಎಫ್‌ಒ ಕಾವ್ಯಾ, ಸಹಾಯಕ ಆರ್‌ಎಫ್‌ಒ ಅಶ್ವತ್ಥ್, ಬೀಟ್ ಫಾರೆಸ್ಟ್ ಸುಮಂತ್, ಶಿವಶಂಕರ್, ಗ್ರಾಮದ ಮುಖಂಡ ರವಿ ಕುನ್ನಹಳ್ಳಿ ಮತ್ತಿತರರು ಇದ್ದರು.ಅರಣ್ಯ ಇಲಾಖೆ ತಕ್ಷಣ ಹುಲಿಯನ್ನು ಪತ್ತೆ ಹಚ್ಚಿ ಸೆರೆ ಹಿಡಿದು, ಬೇರೆಡೆಗೆ ಸ್ಥಳಾಂತರಿಸಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

