Breaking News

ಬೆಂಗಳೂರು: ಚಿಕ್ಕಪ್ಪನ ಲಾಕರ್‌ನಿಂದ ಚಿನ್ನ ಕಳವು; ಆರೋಪಿಯ ಬಂಧನ!!

ತಾಯಿಯ ಸಹೋದರಿಯ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ, 258 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.ಆರೋಪಿ ಪ್ರಥಮ್ ಎಂಬಾತನನ್ನು ಬಂಧಿಸಿದ್ದು, 24.51 ಲಕ್ಷ ಮೌಲ್ಯದ ಆಭರಣ ವಶಪಡಿಸಿಕೊಳ್ಳಲಾಗಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಗಿರಿನಗರ ಪೊಲೀಸರು, ಮನೆಗೆಲಸದವರನ್ನು ವಿಚಾರಿಸಿದರು. ನಂತರ ಪ್ರಥಮ್, ಮನೆಗೆ ಬಂದು ಹೋಗಿರುವ ವಿಷಯ ಗೊತ್ತಾಯಿತು. ಚೆನ್ನೈನಲ್ಲಿದ್ದ ಪ್ರಥಮ್‌ನ ಬ್ಯಾಂಕ್ ವಹಿವಾಟಿನ ಮಾಹಿತಿ ಕಲೆಹಾಕಿದಾಗ ಹಣ ವರ್ಗಾವಣೆ ಆಗಿರುವುದು ಗೊತ್ತಾಯಿತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *