Breaking News

ಶ್ರೀನಗರ :ಭಯೋತ್ಪಾದಕರ ಜೊತೆ ನಂಟು ಹೊಂದಿದ ಇಬ್ಬರು ಅರೆಸ್ಟ್, ಪಿಸ್ತುಲ್ ಸೇರಿದಂತೆ ಸ್ಪೋಟಕ ವಸ್ತುಗಳು ವಶ!

ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರ ಜೊತೆ ನಂಟು ಹೊಂದಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರ ಬಳಿ ಇದ್ದ 1 ಪಿಸ್ತೂರ್, 1 ಗ್ರೇನೆಡ್ ಹಾಗು ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಇನ್ನು ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ಕಳೆದ ಏಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಕನ್ನಡಿಗರು ಸೇರಿ 26 ಜನ ಅಮಾಯಕರು ಬಲಿಯಾಗಿದ್ದರು. ಇದೀಗ ಘಟನೆ ನಡೆದ ಸ್ಥಳದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಓಡಾಡುತ್ತಿದ್ದ ಶಂಕಿತನನ್ನು ಅರೆಸ್ಟ್ ಮಾಡಲಾಗಿದೆ.ಎಪ್ರಿಲ್ 22ರಂದು ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಘಟನಾ ಸ್ಥಳದಲ್ಲಿ ಓಡಾಡುತ್ತಿದ್ದ ಶಂಕಿತ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಓಡಾಡುತ್ತಿದ್ದ ಶಂಕಿತನನ್ನು ಇದೀಗ ಭದ್ರತಾಪಡೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *