ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು,ದ್ವಿಚಕ್ರ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾರೆ.ಚೆನ್ನಕೇಶವ (22) ಮೃತ ದುರ್ದೈವಿ.ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಚೆನ್ನಕೇಶವ ಅವರು ಡ್ರಾಪ್ ಮಾಡಲು ತೆರಳಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಇನ್ನು ಗಾಯಾಳು ಯುವತಿಯನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಈ ಅಪಘಾತದಲ್ಲಿ ಮೃತಪಟ್ಟ ಚೆನ್ನಕೇಶವ ಅವರ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದ್ದು,
ವಿಶ್ವನಾತಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

