ಪ್ರಕರಣ ಒಂದನ್ನು ಇತ್ಯಾರ್ಥ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಕೆಜಿ ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಕೆಜಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯಾವುದೋ ದೂರಿನ ಸಂಬಂಧ, ಆರೋಪಿಗೆ ಸಹಾಯ ಮಾಡಲು 6ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.ಆ ಬಳಿಕ ಡಿವೈಎಸ್‌ಪಿ ಗಿರೀಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ,ಈ ಆರೋಪಿಗಳು ಒಂದು ಲಕ್ಷ ಲಂಚ ಪಡೆಯುವಾಗಲೇ ಅವರನ್ನು ಹಿಡಿಯಲಾಗಿದೆ.ಈ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದು ತನಿಖೆ ಚುರುಕಿಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

