Breaking News

ದೆಹಲಿ : ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ ಉಗ್ರ ‘ಮಸೂದ್ ಅಝರ್’ ಕುಟುಂಬದ 14 ಮಂದಿ ಬಲಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆ ಪ್ರತೀಕಾರದ ಕ್ರಮ ಕೈಗೊಂಡಿದೆ. ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ, ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಜಂಟಿ ದಾಳಿ ನಡೆಸಿವೆ.ಭಾರತದ ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರ್ ಮೇಲೆ ನಿಗಾ ಇಟ್ಟಿದ್ದರು.ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ ಉಗ್ರ ಮಸೂದ್ ಕುಟುಂಬದ 14 ಮಂದಿ ಬಲಿಯಾಗಿದ್ದಾರೆ.ಮಸೂದ್ ಅಝರ್ ಸಹೋದರ , ಸಹೋದರಿ ಸೇರಿ 14 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *