Breaking News

ಕಡೂರು: ಗ್ಯಾಸ್ ಟ್ಯಾಂಕರ್ ಪಲ್ಟಿ, ಅನಿಲ‌ ಸೋರಿಕೆ!

ಬೀರೂರಿನಿಂದ ಲಿಂಗದಹಳ್ಳಿಗೆ ಹೋಗುವ ರಸ್ತೆಯ ತಿರುವಲ್ಲಿ ಮಂಗಳವಾರ ಸಂಜೆ ಎಚ್.ಪಿ.ಕಂಪನಿಯ ಗ್ಯಾಸ್ ಟ್ಯಾಂಕರ್ ಉರುಳಿಬಿದ್ದು ಆತಂಕಕ್ಕೆ ಕಾರಣವಾಯಿತು. ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿದ್ದು, ಸ್ಥಳದಲ್ಲಿ ‌ಅಗ್ನಿ ಶಾಮಕ, ಮೆಸ್ಕಾಂ ಸಿಬ್ಬಂದಿ ಬಿಟ್ಟಿದ್ದಾರೆ. ಆ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಬೀರೂರು ಪಿಎಸ್‌ಐ ಸಜಿತ್ ಕುಮಾರ್ ಮತ್ತು ಸಿಬ್ಬಂದಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ಹಾಲಮೂರ್ತಿ ರಾವ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಭೇಟಿ ನೀಡಿ ಪರಿಶೀಲಿಸಿದರು. ಹಿಂದೂಸ್ತಾನ್‌ ಪೆಟ್ರೋಲಿಯಂ ಕಂಪನಿಯ ಎಂಜಿನಿಯರ್‌ಗಳು ಸ್ಥಳಕ್ಕೆ ಬಂದು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲಿಯವರೆಗೆಮುಂಜಾಗ್ರತಾ ಕ್ರಮವಾಗಿ ವಾಹನ‌ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *