Breaking News

ಬೆಂಗಳೂರು :390 ಗ್ರಾಂ ಚಿನ್ನದ ಗಟ್ಟಿ ಜಪ್ತಿ, ಆರೋಪಿಗಳ ಬಂಧನ!!

ಮನೆಯಲ್ಲಿ ಕನ್ನತನ ಹಾಗೂ ದ್ವಿಚಕ್ರ ವಾಹನಗಳ ಕನ್ನ ಮಾಡಿದ್ದ ಇಬ್ಬರು ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ, 390 ಗ್ರಾಂ ಚಿನ್ನದ ಗಟ್ಟಿ, ಎರಡು ವಾಹನ ವಶಪಡಿಸಿಕೊಂಡಿದ್ದಾರೆ.‌ಕದ್ದ ಬೈಕ್‌ನಲ್ಲಿ ಆರೋಪಿಗಳು ಬಡಾವಣೆಗಳಲ್ಲಿ ಸುತ್ತಾಡಿ ಮನೆಗಳನ್ನು ಗುರುತಿಸಿ, ಕಳ್ಳತನದ ಸಂಚು ರೂಪಿಸಿದ್ದರು. ಚಿನ್ನಾಭರಣ ಕದ್ದು, ಅದನ್ನು ಕರಗಿಸಿ ಚಿನ್ನದ ಗಟ್ಟಿ ಮಾಡಿಸಿ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ಎರಡು ಬೈಕ್, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮಿಥುನ್ ವಿರುದ್ಧ 9 ಹಾಗೂ ಸತೀಶ್ ವಿರುದ್ಧ 7 ಪ್ರಕರಣಗಳು ದಾಖಲಾಗಿವೆ. ಇಬ್ಬರ ಬಂಧನದಿಂದ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ ಎಂದರು.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *