Breaking News

ಚಿತ್ರದುರ್ಗ :ಸಾರಿಗೆ ಬಸ್ ಪಲ್ಟಿ, ಓರ್ವ ವ್ಯಕ್ತಿ ಬಲಿ!!!

ಸಾರಿಗೆ ಬಸ್ ವೊಂದು ರಸ್ತೆ ಪಕ್ಕದಲ್ಲಿದ್ದ ನೇಮ್ ಬೋರ್ಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 26ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.ಜಿಲ್ಲೆಯ ಚಳ್ಳಕೆರೆ ತಾಲೂಕಿನ ಖಂಡೆನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆಎಸ್ ಆರ್ ಟಿಸಿ ಬಸ್, ರಸ್ತೆ ಪಕ್ಕದಲ್ಲಿನ ಬೋರ್ಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸಾರಿಗೆ ಬಸ್ ಯಾದಗಿರಿಯಿಂದ ಚಳ್ಳಕೆರೆ ಮಾರ್ಗವಾಗಿ ತೆರಳುತ್ತಿತ್ತು ಎನ್ನಲಾಗಿದೆ. ಗಾಯಾಳುಗಳು ಚಳ್ಳಕೆರೆ ತಾಲ್ಲೂಕು ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಶಹಪುರ ಮೂಲದ ನಿವಾಸಿ ಶಿವಪ್ಪ(36) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *