Breaking News

ಕನಕಪುರ: ಏಳು ಮಂದಿಗೆ ಕಚ್ಚಿದ ನಾಯಿ!!

ತಾಲ್ಲೂಕಿನ ಸಾತನೂರು ಹೋಬಳಿ ಬೊಮ್ಮನಹಳ್ಳಿಯಲ್ಲಿ ನಾಯಿಯೊಂದು ಏಳು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಮಂಗಳವಾರ ನಡೆದಿದೆ.ಗ್ರಾಮದ ರತ್ನಮ್ಮ, ನಕ್ಷತ್ರ, ಉಮಾ, ಚಿರಾಗ್, ರಾಚಯ್ಯ, ವೆಂಕಟಗಿರಿ ಮತ್ತು ಗೊಲ್ಲರದೊಡ್ಡಿ ಮಹಿಳೆಯೊಬ್ಬರು ನಾಯಿ ದಾಳಿಯಲ್ಲಿ ಗಾಯಗೊಂಡಿದ್ದಾರೆ.ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶದಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಗ್ರಾಮ ಪಂಚಾಯಿತಿಯಿಂದ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಬೇಕೆಂದು ಗ್ರಾ.ಪಂ ಸದಸ್ಯ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.ನಾಯಿಯಿಂದ ಕಚ್ಚಿಸಿಕೊಂಡವರು ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *