Breaking News

ಬೆಂಗಳೂರು :ಕನ್ನಡದ ಹಿರಿ ಸಾಹಿತಿ, ವಿಮರ್ಶಕ `ಜಿ.ಎಸ್.ಸಿದ್ದಲಿಂಗಯ್ಯ’ ನಿಧನ!

ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರಲ್ಲೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.ಅವರು ಕವಿಯಾಗಿ ,ವಿಮರ್ಶಕ ರಾಗಿ, ಅನುವಾದಕರಾಗಿ ಕನ್ನಡ ಪುಸ್ತಕ ಲೋಕಕ್ಕೆ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಯು ಸೇರಿದಂತೆ ಅನೇಕ ಪ್ರತಿಷ್ಠಿತ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಕವಿ ಜಿ ಎಸ್ ಸಿದ್ದಲಿಂಗಯ್ಯ ಅವರ ನಿಧನದಿಂದ ಕನ್ನಡ ಸಾರಸ್ಪತ ಲೋಕ ಒಂದು ಅದ್ಭುತ ಚೇತನವನ್ನು ಕಳೆದುಕೊಂಡಿದೆ

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *