ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿಬಿಟ್ಟ ಆರೋಪದ ಮೇರೆಗೆ ಇಲ್ಲಿನ ಕೇಂದ್ರ ಕಾರಾಗೃಹದ ವಾರ್ಡರ್, ಸಾಲಿಗ್ರಾಮ ನಿವಾಸಿ ಎಚ್.ಎನ್. ಮಧುಕುಮಾರ್ ಅವರನ್ನು ಮಂಗಳವಾರ ಬೆಟ್ಟದಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿಯು ಎಎಸ್‌ಪಿ ವಿರುದ್ಧ ಕೈ ಎತ್ತಿದ್ದನ್ನು ಖಂಡಿಸಿ ಏ.28ರಂದು ಮಧುಕುಮಾರ್ ವಿಡಿಯೊ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ವಾಟ್ಸಪ್ ಮೂಲಕ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

