Breaking News

ಆಪರೇಷನ್ ಸಿಂಧೂರ್: ಹಣೆಗೆ ಸಿಂಧೂರ ಧರಿಸಿ ಸಿದ್ದರಾಮಯ್ಯ ಸುದ್ದಿಗೋಷ್ಠಿ, ಭಾರತೀಯ ಸೇನೆಗೆ ಸಿಎಂ ಅಭಿನಂದನೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಕೈಗೊಂಡ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.ಇಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕುಂಕುಮ ಧರಿಸಿ ಆಗಮಿಸಿದ ಸಿಎಂ ಸಿದ್ದರಾಮಯ್ಯ, ‘ಆಪರೇಷನ್ ಸಿಂಧೂರ್ ಅಭಿನಂದನಾರ್ಹ ಕಾರ್ಯಾಚರಣೆಯಾಗಿದೆ. ಭಾರತೀಯ ಸೇನೆಯು ಉಗ್ರರ ನೆಲೆಗಳ ಮೇಲೆ ನಿಖರವಾಗಿ ದಾಳಿ ನಡೆಸಿ, ದೇಶದ ರಕ್ಷಣೆಯಲ್ಲಿ ತನ್ನ ಶೌರ್ಯವನ್ನು ಮೆರೆದಿದೆ. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರವು ಈ ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲ ನೀಡುತ್ತದೆ,’ ಎಂದು ಹೇಳಿದ್ದಾರೆ.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *