Breaking News

ಬಾಗಪಾತ್ :ಪತ್ನಿಯ ಕತ್ತು ಸೀಳಿ ಅತ್ತೆಗೆ ಕರೆ ಮಾಡಿದ ಅಳಿಯ!!

ಆಟೋ ಚಾಲಕ ಪ್ರಶಾಂತ್ ಪತ್ನಿ ನೇಹಾಳ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಬಾಗ್​ಪತ್​ನಲ್ಲಿ ನಡೆದಿದೆ. ನೇಹಾ ತನ್ನ ತಾಯಿಯ ಮನೆಯಲ್ಲಿ ಒಂಟಿಯಾಗಿರುವಾಗ ಘಟನೆ ನಡೆದಿದೆ.ಅಕ್ಕಪಕ್ಕದ ಮನೆಯವರು ಹೇಳುವ ಪ್ರಕಾರ ಇಬ್ಬರ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು. ಪ್ರಶಾಂತ್ ತನ್ನ ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನಿಸುತ್ತಿದ್ದ. ನಿರಂತರ ಜಗಳದಿಂದ ಬೇಸತ್ತ ನೇಹಾ ಇತ್ತೀಚೆಗೆ ತನ್ನ ತಾಯಿ ರಂಜಿತಾ ಅವರೊಂದಿಗೆ ಅದೇ ಪ್ರದೇಶದಲ್ಲಿ ಮತ್ತೊಂದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.ನಾವು ಮದುವೆಯಾದ ದಿನ, ನಾನು ಅವಳಿಗೆ ಬೇರೆಯವರೊಂದಿಗೆ ಮಾತನಾಡಬಾರದೆಂದು ಹೇಳಿದ್ದೆ. ನೀನು ಏನಾದರೂ ತಪ್ಪು ಮಾಡುತ್ತಿರುವುದು ನನಗೆ ಸಿಕ್ಕಿದ ದಿನ, ನಾನು ನಿನ್ನನ್ನು ಕೊಲ್ಲುತ್ತೇನೆ ಎಂದು ಮೊದಲೇ ಹೇಳಿದ್ದಾಗಿ ತಿಳಿಸಿದ್ದಾನೆ.ಆರೋಪಿ ಅಪರಾಧ ಒಪ್ಪಿಕೊಂಡಿದ್ದಾನೆ. ಕೊಲೆಗೆ ಬಳಸಿದ್ದ ಚಾಕುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *