Breaking News

ಬೆಂಗಳೂರು: ಮೊಬೈಲ್‌ ಜಗಳ ಕೊಲೆಯಲ್ಲಿ ಅಂತ್ಯ!!

ಕಳ್ಳತನ ಮಾಡಿದ್ದ ಮೊಬೈಲ್‌ ಹಿಂದಿರುಗಿಸುವ ವಿಚಾರಕ್ಕೆ ನಡೆದ ಜಗಳ ಮೆಕ್ಯಾನಿಕ್‌ ಎಂಜಿನಿಯರ್‌ವೊಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದ ಜಗಳದಲ್ಲಿ ಅಬ್ದುಲ್‌ ಮಲೀಕ್‌ ಮೃತಪಟ್ಟಿದ್ದಾನೆ. ಅವರ ಸಹಾಯಕ ಜೈನುಲ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಬ್ದುಲ್ ಮಲೀಕ್‌ ಮತ್ತು ಜೈನುಲ್‌ ಅವರು ಐದು ವರ್ಷಗಳಿಂದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು’ ಎಂದು ಹೇಳಿದರು.ಅಬ್ದುಲ್‌ ಮಲೀಕ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಜೈನುಲ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ಬಗ್ಗೆ ಮಾಗಡಿ ರಸ್ತೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮನೋಜ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *