Breaking News

ಬೆಂಗಳೂರು : ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ, ಪೊಲೀಸರಿಂದ ಚೆಕಿಂಗ್!

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣವಿರುವ ಹಿನ್ನಲೆಯಲ್ಲಿ ರಾಜ್ಯದ ಗಡಿ ಭಾಗಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಗಡಿಭಾಗಗಳಲ್ಲಿ ಪೊಲೀಸರು ಪ್ರತೀ ವಾಹನಗಳನ್ನು ಚೆಕಿಂಗ್ ಮಾಡುತ್ತಿದ್ದಾರೆ. ನಿನ್ನೆ ತಡರಾತ್ರಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ.ಹೀಗಾಗಿ ನಿನ್ನೆಯಿಂದ ಕೇರಳ-ಕರ್ನಾಟಕ, ಕರ್ನಾಟಕ-ಮಹಾರಾಷ್ಟ್ರ, ಕರ್ನಾಟಕ-ತಮಿಳುನಾಡು ಗಡಿಭಾಗಗಳಲ್ಲಿ ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದರು. ಪ್ರತೀ ವಾಹನಗಳನ್ನೂ ತಪಾಸಣೆ ಮಾಡಿ ಕಳುಹಿಸಲಾಗುತ್ತಿದೆ. ಕೇಂದ್ರದ ಸೂಚನೆಯಂತೆ ನಾವು ಎಲ್ಲಾ ಭದ್ರತೆ ಕೈಗೊಳ್ಳಲಿದ್ದೇವೆ ಎಂದು ನಿನ್ನೆಯೇ ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವ ಪರಮೇಶ್ವರ್ ಹೇಳಿದ್ದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *