Breaking News

ಹಾವೇರಿ: ಲಾರಿಗೆ ಕಾರು ಡಿಕ್ಕಿಯಾಗಿ, 6 ಜನ ಸ್ಥಳದಲ್ಲೇ ದುರ್ಮರಣ!

ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂದಿನಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿದ್ದ ಆರು ಜನರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಅಪಘಾತ ಸಂಭವಿಸಿದೆ.ಇನ್ನು ಅಪಘಾತದಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಿಗೆ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *