Breaking News

ಕೆಲಸ ಕಳೆದುಕೊಂಡ ನೋವು, ಮಗನನ್ನು ಕೊಂದು, ಆತ್ಮಹತ್ಯೆಗೆ ಶರಣಾದ ಬಸ್ ಕಂಡಕ್ಟರ್!

ಕೆಲಸ ಕಳೆದುಕೊಂಡು ಖಿನ್ನತೆಗೆ ಒಳಗಾದ ಬಸ್ಸಿನ ನಿರ್ವಾಹಕರೊಬ್ಬರು ತನ್ನ ಮಗನನ್ನೇ ಕತ್ತು ಹಿಸುಕಿ ಕೊಲೆಗೈದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಘಟನೆ ಕುರಿತು ಮನೆಮಂದಿಗೆ ವಿಚಾರ ಗೊತ್ತಾಗುತ್ತಿದ್ದಂತೆ ಠಾಣೆಗೆ ಮಾಹಿತಿ ನೀಡಿದ್ದಾರೆ, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೃಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ (ಬೆಸ್ಟ್) ಕಂಡಕ್ಟರ್ ಆಗಿದ್ದ ಶರದ್ ಭೋಯ್ (40) ಆತ್ಮಹತ್ಯೆಗೆ ಶರಣಾಗುರುವ ವ್ಯಕ್ತಿಯಾಗಿದ್ದು, ಭವೇಶ್ ತಂದೆಯಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *