Breaking News

ಇಸ್ಲಾಮಬಾದ :ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ ಧ್ವಂಸ: ಭಾರತದ ದಾಳಿಗೆ ಪಾಕಿಸ್ತಾನ ತತ್ತರ!!

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಉಭಯ ದೇಶಗಳ ಸೇನೆಯಿಂದ ದಾಳಿ-ಪ್ರತಿದಾಳಿ ಆರಂಭವಾಗಿದ್ದು, ಪಾಕಿಸ್ತಾನಕ್ಕೆ ಭಾರತ ಮುಟ್ಟಿನೋಡಿಕೊಳ್ಳುವಂತೆ ತಿರುಗೇಟು ನೀಡುತ್ತಿದೆ.ಇದರ ಬೆನ್ನಲ್ಲೇ ಭಾರತೀಯ ಸೇನೆ ಪಾಕಿಸ್ತಾನದ 14 ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿದೆ. ಲಾಹೋರ್, ರಾವಲ್ಪಿಂಡಿ, ಕರಾಚಿ ಸೇರಿದಂತೆ 14 ನಗರಗಳ ಮೇಲೆ ದಾಳಿ ನಡೆಸಲಾಗಿದ್ದು, ಪಾಕಿಸ್ತಾನದ ಸೇನಾನೆಲೆ, ಕ್ರಿಕೆಟ್ ಸ್ಟೇಡಿಯಂ ಧ್ವಂಸಗೊಂಡಿದೆ.ರಾವಲ್ಪಿಂಡಿಯಲ್ಲಿರುವ ಕ್ರಿಕೆಟ್ ಸ್ಟೇಡಿಯಂ ಮೇಲೆ ಭಾರತೀಯ ಸೇನೆ ಡ್ರೋನ್ ದಾಳಿ ನಡೆಸಿದೆ. ಸ್ಟೇಡಿಂ ಛಿದ್ರಛಿದ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ರಾವಲ್ಪಿಂಡಿ ತೊರೆಯುವಂತೆ ಕ್ರಿಕೆಟ್ ಆಟಗಾರರಿಗೆ ಪಿಸಿಬಿ ಸೂಚನೆ ನೀಡಿದೆ.ಡ್ರೋನ್‌ನ ಮೂಲ ಮತ್ತು ಅದು ಯಾವುದೇ ಪೇಲೋಡ್ ಅನ್ನು ಹೊತ್ತೊಯ್ಯುತ್ತಿದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ. ಗಾಯಗೊಂಡ ಇಬ್ಬರು ನಾಗರಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *