Breaking News

ಚಿತ್ರದುರ್ಗ :ಮದುವೆ ಊಟ ಮಾಡಿದ 150 ಜನ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ!!

ಮದುವೆ ಊಟ ಸೇವಿಸಿದ್ದ 150ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮದುವೆಗೆ ಬಂದಿದ್ದವರಿಗೆ ಸೋಮವಾರ ಬೆಳಗ್ಗೆಯಿಂದ ಹೊಟ್ಟೆ ನೋವು, ವಾಂತಿ, ಭೇದಿ, ಜ್ವರ ಕಾಣಿಸಿಕೊಂಡಿದೆ. ಬೆಳಗಾಗುತ್ತಿದ್ದಂತೆ ತೀವ್ರ ಅಸ್ವಸ್ಥರಾದವರು ಒಬ್ಬೊಬ್ಬರಾಗಿಯೇ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಬೆಡ್ ಗಳೆಲ್ಲಾ ಭರ್ತಿಯಾಗಿವೆ.ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬಂದ ಕಾರಣ ಮಲ್ಲಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಗೂಳಿಹಳ್ಳಿ, ಸುಡಗಾಡನ ಪಾಳ್ಯ ಗ್ರಾಮಗಳಲ್ಲಿಯೇ ಚಿಕಿತ್ಸಾ ಶಿಬಿರ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರನ್ನು ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಮನೆಯಲ್ಲಿನ ಊಟ ಮತ್ತು ನೀರಿನ ಸ್ಯಾಂಪಲ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬರಬೇಕಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ರಾಘವೇಂದ್ರ ಪ್ರಸಾದ್ ತಿಳಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *