ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ಘಟನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣಕ್ಕೀಡಾದ ದಾರುಣ ಘಟನೆ ನಡೆದಿದೆ.ದುಬಾರಿ ಬೆಲೆ ಬಾಳುವ ಆಡಿ ಕಾರು ವೇಗವಾಗಿ ಹೋಗಿ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಲಾರಿಯ ಹಿಂಬದಿಗೆ ಗುದ್ದಿದ ರಭಸಕ್ಕೆ ಆಡಿ ಕಾರು ಗುರುತೇ ಸಿಗದಂತಾಗಿದೆ. ಸಂಪುರ್ಣ ನಜ್ಜುಗುಜ್ಜಾಗಿದ್ದು, ಅಪಘಾತ ಭಾರೀ ಭಯಾನಕವಾಗಿದೆ. ಇನ್ನು ಘಟನೆ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

